ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಭ್ರಷ್ಟಾಚಾರದ ವಿರುದ್ದ ಆಂದೋಲನ

Srinivasa Murthy VN
Updated On : 8 Jul 2014, 6:39 am

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯಾಗಬೇಕೆಂಬ ಉದ್ದೇಶದಿಂದ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯು ಜನಾಭಿಪ್ರಾಯಕ್ಕೆ ಮುಂದಾಗಿದ್ದು, ಇದೇ ಜುಲೈ 10 ರಂದು ರಾಷ್ಟ್ರೀಯ ವಿಚಾರ ಸಂಕೀರಣ ಏರ್ಪಡಿಸಿದೆ.

ಚುನಾವಣಾ ಪದ್ದತಿಯಲ್ಲಿ ಸುಧಾರಣೆ ತರುವ ಮೂಲಕ ಹೇಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಬಹುದು ಎಂಬ ವಿಚಾರದ ಕುರಿತು ಜುಲೈ 10 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಖನಿಜ ಭವನದ 3 ನೇ ಮಹಡಿಯ ಸಭಾಂಗಣದಲ್ಲಿ ಭಷ್ಟಾಚಾರ ನಿರ್ಮೂಲನಾ ವೇದಿಕೆ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಏರ್ಪಡಿಸಿದೆ.

ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಎಂ.ಎಸ್.ವೆಂಕಟಾಚಲಯ್ಯ ಅವರು ಉದ್ಘಾಟನೆ ಮಾಡಲಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ನಾಡೋಜ ಡಾ.ಪಾಟೀಲ ಪುಟ್ಟಪ್ಪ ಹಾಗೂ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ್ ಸೇರಿದಂತೆ ಸಂಘಟನೆಯ ರಾಷ್ಟ್ರೀಯ ಸಂಚಾಲಕರಾದ ಅರುಣ್‌ಕುಮಾರ್‌ರವರು ಅಧ್ಯಕ್ಷತೆ ವಹಿಸಲಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement