ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಮಿತ್ ಶಾ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ

ಭಾರತೀಯ ಜನತಾ ಪಕ್ಷದ...

Mainashree
Updated On : 9 Jul 2014, 7:36 am

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷರನ್ನಾಗಿ ಅಮಿತ್ ಶಾ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷರನ್ನಾಗಿ ಅಮಿತ್ ಶಾ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಉಸ್ತುವಾರಿ ವಹಿಸಿಕೊಂಡಿದ್ದ ಅಮಿತ್ ಶಾ ಅವರು, ಭರ್ಜರಿ ಗೆಲುವಿನ ನಗೆ ಬೀರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾಗಿರುವ ಅಮಿತ್ ಶಾ ವಿರುದ್ಧ ನಕಲಿ ಎನ್‌ಕೌಂಟರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಬೆಳಿಗ್ಗೆ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನ್ನಾಗಿ ಅಮಿತ್ ಶಾ ಅವರ ಹೆಸರನ್ನು ಆಯ್ಕೆ ಮಾಡಲಾಗಿದ್ದು, ಸಭೆಯ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಒಮ್ಮತದಿಂದ ಅಮಿತ್ ಶಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಹಾಜರಿದ್ದ ಪ್ರಧಾನಿ ನರೇಂದ್ರ ಮೋದಿ, ನಾಯಕ ಎಲ್.ಕೆ ಅಡ್ವಾಣಿ ಮತ್ತು ರಾಜನಾಥ್ ಸಿಂಗ್ ನೂತನ ಅಧ್ಯಕ್ಷ ಅಮಿತ್ ಶಾ ಅವರಿಗೆ ಅಭಿನಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement