ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕುಮಾರಸ್ವಾಮಿ ಇನ್ ಸಂಕಟ: ರಾಷ್ಟ್ರಪತಿ ಭವನ ತಲುಪಿದ ಡೀಲ್ ಸಿಡಿ

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಸಂಕಷ್ಟಕ್ಕೆ ಸಿಲುಕುವ...

Lingaraj Badiger
Updated On : 9 Jul 2014, 11:52 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಈಗ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಮೇಲ್ಮನೆ ಸದಸ್ಯತ್ವಕ್ಕೆ ಕೋಟಿ ಕೋಟಿ ಹಣ ಕೊಡಬೇಕು ಎಂದು ಹೇಳಿದ್ದ ಆಡಿಯೋ ಸಿಡಿ ಈಗ ರಾಷ್ಟ್ರಪತಿಗಳ ಭವನ ತಲುಪಿದೆ.

ವಿವಾದಾತ್ಮಕ ಆಡಿಯೋ ಸಿಡಿಯ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಟಿ.ಎಸ್. ಸತ್ಯಾನಂದ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ.

ರಾಜಕೀಯ ಪಕ್ಷವೊಂದು ಶಾಸಕರನ್ನು ಖರೀದಿ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದೆ ಎಂದು ಆರೋಪಿಸಿರುವ ಸತ್ಯಾನಂದ ಅವರು, ಶಾಸಕರ ಖರೀದಿ ಕುರಿತ ಸಂಭಾಷಣೆ ಈ ಸಿಡಿಯಲ್ಲಿದ್ದು, ಈ ಕುರಿತು ಸೂಕ್ತ ತನಿಖೆಯಾಗಬೇಕು ಮತ್ತು ತಪ್ಪಿತಸ್ಥ ಪಕ್ಷದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಷ್ಟ್ರಪತಿಗಳಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಆಯ್ಕೆಯಾಗಿರುವ ಟಿ.ಎ.ಶರವಣ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಡಿ.ಯು.ಮಲ್ಲಿಕಾರ್ಜುನ್ ವಿರುದ್ಧವೂ ತನಿಖೆಯಾಗಬೇಕು ಎಂದು ಸತ್ಯಾನಂದ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಕ್ಷದಿಂದ ಎಂಎಲ್‌ಸಿ ಆಗಲು 25 ಕೋಟಿ ರುಪಾಯಿ ಡಿಮಾಂಡ್ ಮಾಡಿದ ಹಾಗೂ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತ ಹಾಕಲು ಪಕ್ಷದ ಶಾಸಕರು 1 ಕೋಟಿ ಕೇಳುತ್ತಿದ್ದಾರೆ ಎಂದು ಪಕ್ಷ ನಾಯಕರ ಜೊತೆ  ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೊಳ್ಳುತ್ತಿರುವ ಧ್ವನಿಮುದ್ರಿತ ಸಿಡಿ ಕಳೆದ ಶನಿವಾರ ಬಹಿರಂಗವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement