ಕೇಂದ್ರ ಬಜೆಟ್: ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ಒತ್ತು
ಈ ಸಲದ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಅಂಗವಿಕಲರಿಗೆ ವಿಶೇಷ ಒತ್ತು...
ನವದೆಹಲಿ: ಈ ಸಲದ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಅಂಗವಿಕಲರಿಗೆ ವಿಶೇಷ ಒತ್ತು ನೀಡಲಾಗಿದೆ.
ಮಹಿಳಾ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಇದಕ್ಕಾಗಿ 150 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಅಂಗವಿಕಲರಿಗೆ ನೀಡುವ ಸಹಾಯಧನದಲ್ಲಿ ಹೆಚ್ಚಳ ಮಾಡಲಾಗಿದೆ. ನೋಟುಗಳಲ್ಲಿ ಬ್ರೈಲ್ ಲಿಪಿ ಅಳವಡಿಸಲಾಗುವುದು.
ಮಹಿಳೆಯರಿಗೆ ಶೇ. 4 ರೂ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಮಹಿಳಾ ಉದ್ಯಮಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ ಹೆಚ್ಚಳ. ಸಾರಿಗೆ ಕ್ಷೇತ್ರದಲ್ಲಿ ಮಹಿಳಾ ಸುರಕ್ಷೆತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಜೇಟ್ಲಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಘೋಷಿಸಿದ್ದಾರೆ.