ಕ್ರೀಡೆಗೆ ಪ್ರೋತ್ಸಾಹ ನೀಡಲು ರಾಷ್ಟ್ರೀಯ ಕ್ರೀಡಾ ಅಕಾಡೆಮಿ
ಭಾರತೀಯ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ...
ನವದೆಹಲಿ: ಭಾರತೀಯ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಮುಂದಾಗಿದೆ.
ಈ ಕುರಿತು ಇಂದು ಮಂಡನೆಯಾದ ಮೋದಿ ಸರ್ಕಾರದ ಮೊದಲ ಬಜೆಟ್ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಸ್ತಾಪ ಮಾಡಿದ್ದು, ವಿವಿಧ ರೀತಿಯ ಕ್ರೀಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದ ಹಲವು ಕಡೆ ರಾಷ್ಟ್ರೀಯ ಕ್ರೀಡಾ ಅಕಾಡೆಮಿಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೊರ ಮತ್ತು ಒಳಾಂಗಣದ ಕ್ರೀಡಾಂಗಣವನ್ನು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣವನ್ನಾಗಿ ಅಭಿವೃದ್ದಿ ಪಡಿಸಲು 200 ಕೋಟಿ ರುಪಾಯಿ ಮೀಸಲಿರಿಸಲಾಗಿದೆ. ಅಲ್ಲದೆ ಮಣಿಪುರದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗಾಗಿ 100 ಕೋಟಿ ರುಪಾಯಿ ಮೀಸಲಿರಿಸಲಾಗಿದೆ ಎಂದರು.