ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪುಣೆ ಬಾಂಬ್ ಸ್ಪೋಟ: ಉಗ್ರರ ಕೈವಾಡವನ್ನು ತಳ್ಳಿ ಹಾಕುವಂತಿಲ್ಲ: ಪೊಲೀಸ್

ಪುಣೆಯ ಫರಾಸಖಾನ ಪೊಲೀಸ್ ಠಾಣೆಯ ಪಾರ್ಕಿಂಗ್...

Vishwanath S
Updated On : 10 Jul 2014, 6:59 am

ಪುಣೆ: ಪುಣೆಯ ಫರಾಸಖಾನ ಪೊಲೀಸ್ ಠಾಣೆಯ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರು ಬಾಂಬ್ ಸ್ಪೋಟಿಸಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪುಣೆ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಸ್ಪೋಟದ ತೀವ್ರತೆ ಕಡಿಮೆ ಇದ್ದಿದ್ದರಿಂದ ಹೆಚ್ಚಿನ ಅನಾಹುತಗಳು ಸಂಭವಿಸಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ಯಾರು ಬಾಂಬ್ ಸ್ಫೋಟಿಸಿದ್ದಾರೆ ಎಂದು ತಿಳಿದಿಲ್ಲ. ಆದರೆ ಸ್ಫೋಟವನ್ನು ಉಗ್ರರು ನಡೆಸಿಲ್ಲ ಎಂಬುದನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸ್ ಆಯುಕ್ತ ಸತೀಶ್ ಮಾಥೂರ್ ಅವರು ಹೇಳಿದ್ದಾರೆ.

ದುಷ್ಕರ್ಮಿಗಳು ಸ್ಫೋಟಕ್ಕೆ ಮೊಳೆ ಹಾಗೂ ಸೈಕಲ್ ಬಾಲ್ಸ್‌ಗಳನ್ನು ಬಳಸಿದ್ದು, ತನಿಖಾಧಿಕಾರಿಗಳ ತನಿಖೆಯಿಂದ ತಿಳಿದುಬಂದಿದೆ ಎಂದರು.

ಇಂದು ಮಧ್ಯಾಹ್ನ ದುಷ್ಕರ್ಮಿಗಳು ಪೊಲೀಸ್ ಠಾಣೆಯ ಎದುರೇ ಬೈಕ್‌ನಲ್ಲಿ ಬಾಂಬ್ ಇರಿಸಿ ಸ್ಪೋಟಿಸಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement