ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಸಿಸಿಐನ ಹಂಗಾಮಿ ಅಧ್ಯಕ್ಷರ ಸಂಬಳ ನೀಡಿ, ಸುಪ್ರೀಂಗೆ ಸುನೀಲ್ ಪತ್ರ

Vishwanath S
Updated On : 11 Jul 2014, 5:48 am

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಬಳ ನೀಡುವಂತೆ ಭಾರತದ ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಅವರು ಶುಕ್ರವಾರ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದ್ದಾರೆ.

ಸುಪ್ರೀಂ ಆದೇಶದ ಮೇರೆಗೆ ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇಲ್ಲಿಯವರೆಗೂ ತಮಗೆ ಸಂಬಳ ನೀಡಿಲ್ಲ ಎಂದು ಸುನೀಲ್ ಗವಾಸ್ಕರ್ ಅವರು ಸುಪ್ರೀಂಕೋರ್ಟ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಗವಾಸ್ಕರ್ ಅವರು ಯಾವುದೇ ಕಾನೂನು ವಿಧಾನ ಬಳಸದೆ ನೇರವಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದ್ದು, ಗವಾಸ್ಕರ್ ಪತ್ರವನ್ನು ಸುಪ್ರೀಂ ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

ಸುನೀಲ್ ಗವಾಸ್ಕರ್ ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ದುಬೈನಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್‌ನ 7ನೇ ಆವೃತ್ತಿ ಯಶ್ವಸಿಯಾಗಿ ನಡೆದಿತ್ತು.

ಬಿಸಿಸಿಐ ಅಧ್ಯಕ್ಷರಾಗಿದ್ದ ಎನ್. ಶ್ರೀನಿವಾಸನ್ ಅವರು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ, ಬಿಸಿಸಿಐನ ಹಂಗಾಮಿ ಅಧ್ಯಕ್ಷರನ್ನಾಗಿ ಸುನೀಲ್ ಗವಾಸ್ಕರ್ ಅವರನ್ನು ನೇಮಕ ಮಾಡಿ ಸುಪ್ರೀಂಕೋರ್ಟ್ ಕಳೆದ ಮೇ 28 ರಂದು ಮಧ್ಯಂತರ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement