ವಿವಾದಾತ್ಮಕ ಹೇಳಿಕೆ: ರಾಹುಲ್ ಗಾಂಧಿಗೆ ಸಮನ್ಸ್
ಭಿವಾಂಡಿ(ಮಹಾರಾಷ್ಟ್ರ): ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಭಿವಾಂಡಿ ಕೋರ್ಟ್ ಸಮನ್ಸ್ ನೀಡಿದೆ.
ಕಾಂಗ್ರೆಸ್ ಪರ ಚುನಾವಣಾ ಪ್ರಚಾರದ ವೇಳೆ 'ಆರ್ಎಸ್ಎಸ್ನವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕರು' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಭಿವಾಂಡಿ ಕೋಟ್ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.
ರಾಷ್ಟ್ರೀಯ ಸ್ವಯಂ ಸೇವಕರ ಸಂಘ (ಆರ್ಎಸ್ಎಸ್) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಆರ್ಎಸ್ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬುವರು ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು.
ಮಾರ್ಚ್ 6ರಂದು ಮಹಾರಾಷ್ಟ್ರದಲ್ಲಿ ನಡೆದ ಚುನಾವಣಾ ರ್ಯಾಲಿ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದರು.