ನಾಪತ್ತೆಯಾಗಿದ್ದ ಪಿಯು ವಿದ್ಯಾರ್ಥಿನಿ ಶವವಾಗಿ ಪತ್ತೆ
ಜುಲೈ 9ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿದ್ದು,...
ಉಡುಪಿ: ಜುಲೈ 9ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿದ್ದು, 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾಗಿದ್ದ ರತ್ನಾ ಕೊಟ್ಟಾರಿ ಎಂಬ ವಿದ್ಯಾರ್ಥಿನಿ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹಲಂದೂರು ಗ್ರಾಮದ ನಿವಾಸಿಯಾಗಿದ್ದು, ಜುಲೈ 9ರಂದು ಕಾಲೇಜ್ನಿಂದ ವಾಪಸ್ ಬರುತ್ತಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು ಎನ್ನಲಾಗಿದೆ.
ದುಷ್ಕರ್ಮಿಗಳು ಇಂದು ಬೆಳಗ್ಗೆ ಆಕೆಯ ಮನೆಯ ಬಳಿಯೇ ಶವ ಬಿಸಾಡಿ ಹೋಗಿದ್ದಾರೆ. ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.