ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಂಬೈನಲ್ಲಿ ಕಟ್ಟಡ ಕುಸಿತ: ಓರ್ವ ಸಾವು

Vishwanath S
Updated On : 12 Jul 2014, 2:08 am

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, 6 ಮಂದಿಗೆ ಗಾಯಗಳಾಗಿವೆ.

ಮುಂಬೈನಲ್ಲಿ ನಿನ್ನೆಯಿಂದ ಎಡಬಿಡದೆ ಮಳೆಯಾಗುತ್ತಿದ್ದು, ಇದರಿಂದಾಗಿ ಮುಂಬೈನ ಕೊಲಾಬಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲದೆ ಈ ದುರ್ಘಟನೆಯಲ್ಲಿ 6 ಮಂದಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement