ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಂಧರಹಿತ ರಾಜ್ಯ ನಿರ್ಮಾಣಕ್ಕೆ ಸರ್ಕಾರ ಸಿದ್ಧ ; ಯು.ಟಿ.ಖಾದರ್

ಅಂಧರಹಿತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ..

Srinivasa Murthy VN
Updated On : 14 Jul 2014, 8:30 am

ಬೆಂಗಳೂರು: ಅಂಧರಹಿತ ಕರ್ನಾಟಕ ನಿರ್ಮಾಣಕ್ಕೆ  ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.
ನಗರದ ಚಂದ್ರಲೇಔಟ್‍ನಲ್ಲಿ ಸ್ಥಾಪಿತವಾಗಿರುವ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಬೆಂಗಳೂರು ನೇತ್ರಾಲಯ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು , ಕಣ್ಣಿನ ದೋಷವಿರುವ ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಖಾಸಗಿ ವೈದ್ಯರ ಸಹಕಾರ ಅಗತ್ಯ. ಶಾಲಾ ಹಂತದಲ್ಲಿಯೇ ಎಲ್ಲಾ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಬೇಕು. ಮಕ್ಕಳ್ಳಲ್ಲಿಯೇ  ದೃಷ್ಟಿ ದೋಷದ ಸಮಸ್ಯೆಗೆ ಚಿಕಿತ್ಸೆ ನೀಡಿದ್ದಲ್ಲಿ ಅಂಧತ್ವ ಸಮಸ್ಯೆ ನಿವಾರಣೆ ಸುಲಭ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳು ಹೆಚ್ಚೆಚ್ಚು ಶಿಬಿರಗಳನ್ನು ನಡೆಸಬೇಕು. ಶಿಬಿರಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನು ಸರ್ಕಾರದಿಂದ ನೀಡಲಾಗುವುದು ಎಂದು ತಿಳಿಸಿದರು.
ಕೇಂದ್ರ ಮಾಜಿ ಸಚಿವ ಎಂ.ವಿ. ರಾಜಶೇಖರನ್ ಮಾತನಾಡಿ, ಪರಿಸರ ಮಾಲಿನ್ಯ ಸಮಸ್ಯೆ ಹೆಚ್ಚಿದಂತೆ ಕಣ್ಣಿನ ಸಮಸ್ಯೆ ಕೂಡ ಹೆಚ್ಚಾಗುತ್ತಿದೆ. ಆಸ್ಪತ್ರೆಗಳು ವ್ಯಾಪಾರಿ ದೃಷ್ಟಿಕೋನವನ್ನು ಬಿಟ್ಟು , ಮಾನವೀಯ ಮೌಲ್ಯದೊಂದಿಗೆ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದರು.
ಪಿಇಎಸ್ ವಿವಿ ಕುಲಾಧಿಪತಿ ಪ್ರೊ ಎಂ.ಆರ್. ದೊರೆಸ್ವಾಮಿ ಮಾತನಾಡಿ ಸಮಾಜದಲ್ಲಿ ವೈದ್ಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ, ಉತ್ತಮ ವೈದ್ಯರ ಕೊರತೆ ಎದ್ದು ಕಾಣುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನೇತ್ರಾಲಯದ ಮುಖ್ಯಸ್ಥರಾದ ಡಾ.ಎನ್. ವೀರಭದ್ರರಾವ್ ಹಾಗೂ ಡಾ.ಎಂ.ದೇವರಾಜ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement