ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹೇಲ ಜಯವರ್ಧನೆ

ಶ್ರೀಲಂಕಾದ ಕ್ರಿಕೆಟಿಗ ಮಹೇಲ ಜಯವರ್ಧನೆ ಈ ವರ್ಷಾಂತ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ...

Rashmi Kasaragodu
Updated On : 14 Jul 2014, 6:35 am

ಲಂಡನ್:  ಶ್ರೀಲಂಕಾದ ಕ್ರಿಕೆಟಿಗ ಮಹೇಲ ಜಯವರ್ಧನೆ ಈ ವರ್ಷಾಂತ್ಯದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸೋಮವಾರ ಹೇಳಿಕೆ ನೀಡಿದೆ.

ಆಗಸ್ಟ್‌ನಲ್ಲಿ ಪಾಕಿಸ್ತಾನದ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಗಳ ನಂತರ ಜಯವರ್ಧನೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ.

37ರ ಹರೆಯದ ಜಯವರ್ಧನೆ ಇತ್ತೀಚೆಗೆ ನಡೆದ ಟ್ವೆಂಟಿ-20 ವಿಶ್ವಕಪ್ ಪಂದ್ಯ ಗೆದ್ದುಕೊಂಡ ನಂತರ ಕುಮಾರ ಸಂಗಕ್ಕಾರ ಜತೆಗೆ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಇನ್ಮುಂದೆ ಜಯವರ್ಧನೆ ಕೇವಲ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ.

ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಜಯವರ್ಧನೆ ಆಡಲಿದ್ದಾರೆ.

ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನದ ವಿರುದ್ಧ ನಡೆಯಲಿರುವ ಸರಣಿ ಟೆಸ್ಟ್ ಪಂದ್ಯಗಳ ನಂತರ ಜಯವರ್ಧನೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಲಿದ್ದಾರೆ ಎಂದು ಪತ್ರ ಬರೆದಿರುವುದಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಆಶ್ಲೇ  ಡಿ ಸಿಲ್ವಾ ಹೇಳಿದ್ದಾರೆ.

ಕಳೆದ 18 ವರ್ಷಗಳಿಂದ ನಾನು ದೇಶವನ್ನು ಪ್ರತಿನಿಧೀಕರಿಸುತ್ತಾ ಬಂದಿದ್ದೀನಿ. ಈ ನಿರ್ಧಾರ ತೆಗೆದುಕೊಳ್ಳುವುದು ಸುಲಭವಾಗಿರಲಿಲ್ಲ. ಆದರೆ ನಿವೃತ್ತಿ ಘೋಷಿಸುವುದಕ್ಕೆ ಇದು ತಕ್ಕ ಸಮಯ ಎಂದು ಜಯವರ್ಧನೆ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯವನ್ನು ಗೆದ್ದುಕೊಂಡಿದ್ದ ಇವರು ಒಟ್ಟು 145 ಟೆಸ್ಟ್ ಪಂದ್ಯಗಳನ್ನಾಡಿದ್ದು 11,493ರನ್ ಗಳಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement