ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಟ್ರಾಯ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟಿದ್ದು...

Rashmi Kasaragodu
Updated On : 14 Jul 2014, 2:58 am

ನವದೆಹಲಿ: ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟಿದ್ದು ಇದಕ್ಕೆ ಬಿಜೆಪಿ ಖುಷಿ ವ್ಯಕ್ತಪಡಿಸಿದೆ.

ಸೋಮವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆಯೂ ಮಸೂದೆ ಮಂಡನೆಯಾಗಿದೆ.

ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಮಿತ್ರ ಪಕ್ಷವಾದ ಮಾಯಾವತಿ ನೇತೃತ್ವದ ಬಿಎಸ್ಪಿ ಮಸೂದೆ ಮಂಡನೆಗೆ ಬೆಂಬಲ ಸೂಚಿಸುವ ಮೂಲಕ ಬಿಜೆಪಿಗೆ ನೆರವಾಗಿದೆ.

ಟ್ರಾಯ್ ನಿವೃತ್ತ ಅಧ್ಯಕ್ಷ ನೃಪೇಂದ್ರ ಮಿಶ್ರಾರನ್ನು ಪ್ರಧಾನಿ ನರೇಂದ್ರಮೋದಿಯವರ ಕಾರ್ಯದರ್ಶಿಯಾಗಿ ನೇಮಕ ಮಾಡಿಕೊಳ್ಳುವಲ್ಲಿ ಎದುರಾಗಿರುವ ಕಾನೂನು ಸಂಬಂಧಿ ಅಡೆತಡೆಗಳನ್ನು ನಿವಾರಿಸಲು ಟ್ರಾಯ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ತೀರ್ಮಾನಿಸಿತ್ತು.

ಲೋಕಸಭೆಯಲ್ಲಿ ಮಂಡನೆಯಾದ ನಂತರ ಪ್ರಸ್ತುತ ಮಸೂದೆಯು ಇನ್ನು ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಾಗಿದೆ.

ಆದಾಗ್ಯೂ, ಈ ಮಸೂದೆಯನ್ನು ವಿರೋಧಿಸುವ ಅಗತ್ಯವಿಲ್ಲವೆಂದು ಇತರ ವಿರೋಧ ಪಕ್ಷಗಳು ಹೇಳಿದರೂ ರಾಜ್ಯಸಭೆಯಲ್ಲಿ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌ಪಕ್ಷ ಮಸೂದೆಯನ್ನು ಮಂಡನೆ ಮಾಡಲು ಬಿಡುವುದೇ? ಎಂಬುದು ಸದ್ಯದ ಪ್ರಶ್ನೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement