ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಟ್ರಾಯ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ...

Rashmi Kasaragodu
Updated On : 15 Jul 2014, 5:50 am

ನವದೆಹಲಿ: ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದ ನಂತರ ಮಂಗಳವಾರ ರಾಜ್ಯಸಭೆಯಲ್ಲಿ ಮಂಡನೆಯಾಗಿದೆ.

ಸೋಮವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆ ಮಸೂದೆ ಮಂಡನೆಯಾಗಿತ್ತು. ರಾಜ್ಯಸಭೆಯಲ್ಲೂ ಇದು ಪುನರಾವರ್ತನೆಯಾಗಿದ್ದರೂ ಪ್ರಸ್ತುತ ಮಸೂದೆಗೆ ಅಂಗೀಕಾರ ಲಭಿಸಿದೆ.

ನಿರೀಕ್ಷಿಸಿದಂತೆ ರಾಜ್ಯಸಭೆಯಲ್ಲಿಯೂ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಮಿತ್ರ ಪಕ್ಷವಾದ ಮಾಯಾವತಿ ನೇತೃತ್ವದ ಬಿಎಸ್ಪಿ ಮಸೂದೆ ಮಂಡನೆಗೆ ಬೆಂಬಲ ಸೂಚಿಸುವ ಮೂಲಕ ಬಿಜೆಪಿಗೆ ನೆರವಾಗಿದೆ.

ಟ್ರಾಯ್ ನಿವೃತ್ತ ಅಧ್ಯಕ್ಷ ನೃಪೇಂದ್ರ ಮಿಶ್ರಾರನ್ನು ಪ್ರಧಾನಿ ನರೇಂದ್ರಮೋದಿಯವರ ಕಾರ್ಯದರ್ಶಿಯಾಗಿ ನೇಮಕ ಮಾಡಿಕೊಳ್ಳುವಲ್ಲಿ ಎದುರಾಗಿರುವ ಕಾನೂನು ಸಂಬಂಧಿ ಅಡೆತಡೆಗಳನ್ನು ನಿವಾರಿಸಲು ಟ್ರಾಯ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ತೀರ್ಮಾನಿಸಿತ್ತು.

ಎನ್‌ಡಿಎಗೆ ಇಲ್ಲಿ ಬಹುಮತ ಇಲ್ಲದೇ ಇದ್ದರೂ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕರಿಸಲ್ಪಡುತ್ತದೆ ಎಂಬ ಆತ್ಮವಿಶ್ವಾಸ ನಮಗಿತ್ತು ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯನಾಯ್ಡು ಹೇಳಿದ್ದಾರೆ.

 ಮಂಗಳವಾರ ರಾಜ್ಯಸಭೆಯಲ್ಲಿ ಟ್ರಾಯ್ ತಿದ್ದುಪಡಿ ಮಸೂದೆ ಮಂಡನೆಗೆ ಎಲ್ಲರೂ ಹಾಜರಿರುವಂತೆ ಬಿಜೆಪಿ ಪಕ್ಷ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement