ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳಕ್ಕೆ ಆಗ್ರಹ

Lingaraj Badiger
Updated On : 16 Jul 2014, 5:22 am

ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಜುಲೈ 21 ರಂದು ಬೆಂಗಳೂರು ಚಲೋ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ
ಅಂಗನವಾಡಿ ಕಾರ್ಯಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಎನ್.ಶಿವಣ್ಣ ಹೇಳಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಶಿವಣ್ಣ, ಅಂಗನವಾಡಿ ಕಾರ್ಯಕರ್ತರಿಗೆ ನೀಡುವ ಮಾಸಿಕ ಗೌರವಧನವನ್ನು 15000 ರುಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತರನ್ನು ಮತ್ತು ಸಹಾಯಕಿಯರನ್ನು ಪೂರ್ಣಾವಧಿ ನೌಕರರೆಂದು ಪರಿಗಣಿಸಿ ಅವರ ನೌಕರಿಯನ್ನು ಖಾಯಂಗೊಳಿಸಬೇಕು ಮತ್ತು ಎಲ್ಲಾ ಅಂಗನವಾಡಿ ಕಾರ್ಯಕರ್ತರ ಇಎಸ್‌ಐ , ಭವಿಷ್ಯ ನಿಧಿ ಹಾಗು ಗ್ರಾಚ್ಯುಯಿಟಿ ಯೋಜನೆಗಳನ್ನು ಜಾರಿ ಗೊಳಿಸಬೇಕೆಂದು ಸಂಘದ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement