ಗುಲ್ಬರ್ಗದಲ್ಲಿ ಆಟೋ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ
ನಗರದ ಆಟೋ ಚಾಲಕನೊಬ್ಬ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ...
ಗುಲ್ಬರ್ಗಾ: ನಗರದ ಆಟೋ ಚಾಲಕನೊಬ್ಬ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ಮಿಸಿ, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬುಧವಾರ ಗುಲ್ಬರ್ಗಾದಲ್ಲಿ ನಡೆದಿದೆ.
ಮುಂಬೈಯಿಂದ ನಗರದ ರೇಲ್ವೆ ನಿಲ್ದಾಣಕ್ಕೆ ಆಗಮಿಸಿದ ಮಹಿಳೆ ಆಟೋದಲ್ಲಿ ತೆರಳುತ್ತಿದ್ದಾಗ, ಚಾಲಕ ನಿಗದಿತ ಸ್ಥಳಕ್ಕೆ ಕರೆದೊಯ್ಯದೇ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಲ್ಲದೆ ಪ್ರತಿರೋಧ ತೋರಿದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಅಸ್ವಸ್ಥ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.