ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಷ್ಯಾದ ಜತೆಗಿನ ಸಂಬಂಧ ಇನ್ನಷ್ಟು ಉತ್ತಮಗೊಳಿಸಲು ಭಾರತ ಆಗ್ರಹ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ರಷ್ಯಾದ ಅಧ್ಯಕ್ಷ ವ್ಲಾಡಮಿರ್ ಪುಟಿನ್ ....

Rashmi Kasaragodu
Updated On : 16 Jul 2014, 2:02 am

ಫೋರ್ಟಲೇಜಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ರಷ್ಯಾದ ಅಧ್ಯಕ್ಷ ವ್ಲಾಡಮಿರ್ ಪುಟಿನ್ ಜತೆ ಮಾತುಕತೆ ನಡೆಸಿದ್ದಾರೆ.

ಸೋಮವಾರ ರಾತ್ರಿ ಚೀನಾ ಅಧ್ಯಕ್ಷ ಕ್ಸಿ ಚಿನ್‌ಪಿಂಗ್ ಜತೆ ಮೋದಿ ಮಾತುಕತೆ ನಡೆದಿತ್ತು.

ರಷ್ಯಾದ ಅಧ್ಯಕ್ಷರ ಜತೆಗಿನ ಮಾತುಕತೆಯ ನಂತರ ಮಾತನಾಡಿದ ಮೋದಿ, ಡಿಸೆಂಬರ್‌ನಲ್ಲಿ ರಷ್ಯಾ ನಾಯಕರನ್ನು ಭಾರತಕ್ಕೆ ಆಹ್ವಾನಿಸುವ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಎಂದಿದ್ದಾರೆ.

ಅದೇ ವೇಳೆ ರಷ್ಯಾ ಜತೆಗಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವ ಬಗ್ಗೆ ರಷ್ಯಾ ಅಧ್ಯಕ್ಷರ ಜತೆಗೆ ಮಾತುಕತೆ ನಡೆಸಿರುವುದಾಗಿ ಮೋದಿ ಹೇಳಿದ್ದಾರೆ.

2 ದಿನಗಳ ಕಾಲ ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್  ರಾಷ್ಟ್ರಗಳ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಪುಟಿನ್ ಅವರ ನಾಯಕತ್ವವನ್ನು  ಶ್ಲಾಘಿಸಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ರಷ್ಯಾದ ಸಹಾಯ ಅಪೇಕ್ಷಿಸಿದ ಮೋದಿ ಭಾರತದೊಂದಿಗಿನ ಬಾಂಧವ್ಯವನ್ನು ಇನ್ನಷ್ಟು ಉತ್ತಮ ಪಡಿಸಲು ರಷ್ಯಾ ಸಹಕಾರ ನೀಡುತ್ತದೆ ಎಂಬ ಭರವಸೆ ತಮಗಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement