ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆಗೆ ಜೀವ ಬೆದರಿಕೆ

ಕಳೆದ ಶುಕ್ರವಾರ ರಾತ್ರಿ ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 22ರ...

Rashmi Kasaragodu
Updated On : 16 Jul 2014, 6:25 am

ಬೆಂಗಳೂರು: ಕಳೆದ ಶುಕ್ರವಾರ ರಾತ್ರಿ ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 22ರ ಹರೆಯದ ಯುವತಿಗೆ ಕೆಲವು ಕಿಡಿಗೇಡಿಗಳು ಜೀವಬೆದರಿಕೆ ಒಡ್ಡಿದ್ದಾರೆ ಎಂದು ಯುವತಿ ದೂರಿದ್ದಾಳೆ.


ಬುಧವಾರ ತನ್ನ ಗೆಳೆಯುನೊಂದಿಗೆ ನಗರದ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರನ್ನು ಭೇಟಿ ಮಾಡಿದ ಯುವತಿ ಕಿಡಿಗೇಡಿಗಳು ತನಗೆ ಜೀವಬೆದರಿಕೆಯನ್ನೊಡ್ಡಿರುವುದಾಗಿ ಹೇಳಿದ್ದಾಳೆ.

ಅದೇ ವೇಳೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವತಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾಳೆ.

ಯುವತಿಯ ಮನವಿಗೆ ಸ್ಪಂದಿಸಿದ ಆಯುಕ್ತರು ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ.

ಸ್ಥಳೀಯರಿಂದ ಪ್ರತಿಭಟನೆ: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಿಕೇಶಿನಗರ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಸ್ಥಳೀಯರು ಇನ್‌ಸ್ಪೆಕ್ಟರ್ ರಫೀಕ್ ಅಮಾನತು ಹಿಂಪಡೆಯಿರಿ ಎಂದು ಒತ್ತಾಯಿಸಿ ಸ್ಥಳೀಯರು ಎಸಿಪಿ ಷರೀಫ್ ಅವರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement