ಸಲಿಂಗಿಗಳ ರಕ್ಷಣೆಗೆ ಸರ್ಕಾರ ಬದ್ಧ: ಹರ್ಷವರ್ಧನ್
ಸಲಿಂಗಿಗಳ ರಕ್ಷಣೆ ಸರ್ಕಾರದ ಹೊಣೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ....
ನವದೆಹಲಿ: ಸಲಿಂಗಿಗಳ ರಕ್ಷಣೆ ಸರ್ಕಾರದ ಹೊಣೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಸಲಿಂಗಿಗಳು ಸೇರಿದಂತೆ ಎಲ್ಲರಿಗೂ ಮಾನವ ಹಕ್ಕುಗಳಿವೆ. ಅದನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಸಲಿಂಗಕಾಮ ಅಪರಾಧ ಎಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಬಗ್ಗೆ ಬಿಜೆಪಿ ಯಾವ ನಿಲುವು ಸ್ವೀಕರಿಸಿದೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಲು ಸಚಿವರು ನಿರಾಕರಿಸಿದ್ದಾರೆ .
ಕಳೆದ ವರ್ಷ ಸಲಿಂಗಕಾಮದ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ವಿಧಿಯನ್ನು ಬಿಜೆಪಿ ವಿರೋಧಿಸಿತ್ತು. ಆದರೆ ಇದೀಗ ಸರ್ಕಾರ ಯಾವ ರೀತಿಯ ನಡೆ ಸ್ವೀಕರಿಸುತ್ತದೆ ಎಂಬುದರ ಬಗ್ಗೆ ಉತ್ತರಿಸಲು ಸಚಿವರು ತಯಾರಾಗಲಿಲ್ಲ.