2011ನೇ ಸಾಲಿನ ಕೆಎಎಸ್ ಮರು ಪರೀಕ್ಷೆಗೆ ಒತ್ತಾಯ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿರುವ 2011 ಸಾಲಿನ ಕೆಎಎಸ್ ಅಧಿಕಾರಿಗಳ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಮರು ಪರಿಕ್ಷೆಗೆ ಆದೇಶ ನೀಡಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ಕೆ. ಎಸ್. ಶಿವರಾಮ, 2011ನೇ ಕೆಎಎಸ್ ಮರು ಪರೀಕ್ಷೆಗೆ ಒತ್ತಾಯಿಸಿ ಜುಲೈ 21 ರಂದು ಬೆಳಿಗ್ಗೆ 11:30ಕ್ಕೆ ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಜಾಥ ಹೊರಟು, ಜುಲೈ 22ಕ್ಕೆ ನಗರದ ಫ್ರೀಡಂ ಪಾರ್ಕನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆಎಂದು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಹಿರಿಯ ಸ್ವಾತಂತ್ರ್ಯ. ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಕಾಂಗ್ರೇಸ್ ಮುಖಂಡ ಪ್ರೊ.ಬಿ.ಕೆ. ಚಂದ್ರಶೇಖರ್, ಹಾಗು ಸಾಹಿತಿಗಳಾದ ಚಂದ್ರಶೇಖರ ಪಾಟೀಲ ಅವರುಗಳು ಭಾಗವಹಿಸಲಿದ್ದಾರೆ.