3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ: ದಿನಾಂಕ ನಿಗದಿ
ಲೋಕಸಭಾ ಚುನಾವಣೆಯಿಂದ ತೆರವಾಗಿದ್ದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 21ರಂದು ಮತದಾನ ನಡೆಯಲಿದೆ.
ಬೆಂಗಳೂರು: ಲೋಕಸಭಾ ಚುನಾವಣೆಯಿಂದ ತೆರವಾಗಿದ್ದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 21ರಂದು ಮತದಾನ ನಡೆಯಲಿದೆ.
ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದ ಬಿಎಸ್ ಯಡಿಯೂರಪ್ಪ, ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಪ್ರಕಾಶ್ ಹುಕ್ಕೇರಿ ಮತ್ತು ಬಳ್ಳಾರಿ ಗ್ರಾಮಾಂತರ ಜಿಲ್ಲೆ ಕ್ಷೇತ್ರದ ಶಾಸಕರಾಗಿದ್ದ ಬಿ.ಶ್ರೀರಾಮುಲು ಅವರು ಸಂಸದರಾಗಿ ಆಯ್ಕೆಯಾದ ಬಳಿಕ ತಮ್ಮ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ 3 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ.
ಇದೇ ಜುಲೈ 26ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲ್ಲಿದ್ದು, ಆಗಸ್ಟ್ 21ರಂದು ಮತದಾನ ನಡೆಯಲಿದೆ. ಆಗಸ್ಟ್ 25ರಂದು ಮತಎಣಿಕೆ ಕಾರ್ಯ ನಡೆಯಲಿದೆ.