ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾರ್ಯಕರ್ತರ ಬಂಧನ: ಬಿಜೆಪಿ ವಿರುದ್ಧ ಆಪ್ ಕಿಡಿ

ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಬಂಧನದಿಂದ ಬಿಜೆಪಿ ಪಕ್ಷ ದೆಹಲಿಯಲ್ಲಿ ಸರ್ಕಾರ ರಚಿಸಲು..

Srinivasa Murthy VN
Updated On : 19 Jul 2014, 5:24 am

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಬಂಧನದಿಂದ ಬಿಜೆಪಿ ಪಕ್ಷ ದೆಹಲಿಯಲ್ಲಿ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಆಪ್ ಮುಖಂಡ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ತನ್ನ ಪ್ರಭಾವ ಬಳಿಸಿಕೊಂಡು ದೆಹಲಿಯಲ್ಲಿಯೂ ಸರ್ಕಾರ ರಚನೆ ಮಾಡಲು ಮುಂದಾಗಿದೆ. ದೆಹಲಿ ಪೊಲೀಸರ ಮೇಲೆ ತನ್ನ ಪ್ರಭಾವ ಬಳಸಿಕೊಂಡು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಇಲ್ಲ ಸಲ್ಲದ ಪ್ರಕರಣಗಳನ್ನು ದಾಖಲಿಸಿ ಬಂಧಿಸಲಾಗುತ್ತಿದೆ. ಆ ಮೂಲಕ ನಮ್ಮ ಬಿಜೆಪಿ ಒತ್ತಡ ತಂತ್ರ ಹೇರಲು ಹವಣಿಸುತ್ತಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದರು.

ಈ ಹಿಂದೆ ದಕ್ಷಿಣ ದೆಹಲಿಯ ಜಾಮಿಯಾ ನಗರದಲ್ಲಿ ಆಪ್ ಪಕ್ಷದ ಮುಖಂಡ ದಿಲೀಪ್ ಪಾಂಡೆ ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ಶಾಸಕರ ವಿರುದ್ಧ ಪೋಸ್ಟರ್‌ಗಳನ್ನು ಹಾಕುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಅವರ ವಿರುದ್ಧ ಐಪಿಸಿ ಸೆಕ್ಷನ್ 295 ಮತ್ತು ಜಾಮೀನು ರಹಿತ ಕಲಂ 153ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಹಿಂದೆ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಕೂಡ ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ಮತ್ತು ಬಿಜೆಪಿ ಪಕ್ಷ ಒಳ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿಯೇ ಸಂವಿಧಾನವನ್ನು ಬದಿಗೊತ್ತಿ ಉಪರಾಜ್ಯಪಾಲ ನಜೀಬ್ ಜಂಗ್ ಅವರು ಬಿಜೆಪಿ ಪಕ್ಷಕ್ಕೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಇದಕ್ಕಾಗಿ ಬಿಜೆಪಿ ಶಾಸಕರ ಕುದುರೆ ವ್ಯಾಪರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement