ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅತ್ಯಾಚಾರ ವಿರೋಧಿಸಿ ಜು.26ಕ್ಕೆ ಕರ್ನಾಟಕ ಬಂದ್

ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ...

File photo
Lingaraj Badiger
Updated On : 21 Jul 2014, 3:30 am

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷ ಜುಲೈ 26ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಜು.26ರ ಶನಿವಾರದಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಅತ್ಯಾಚಾರದಂತಹ ಹೇಯ ಕತ್ಯವನ್ನು ಖಂಡಿಸಿ ಬಂದ್ ಗೆ ಕರೆ ನೀಡಿರುವುದರಿಂದ ತಮ್ಮ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೆಂಬಲ ನೀಡುವ ವಿಶ್ವಾಸವಿದೆ ಎಂದು ವಾಟಾಳ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement