ಕೆಪಿಎಸ್‌ಸಿ ಅಕ್ರಮ: ನೇಮಕಾತಿ ರದ್ದತಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ನೇಮಕಾತಿಯನ್ನು ರದ್ದುಗೊಳಿಸುವಂತೆ...
ಬೆಂಗಳೂರು: 2011ನೇ ಸಾಲಿನ ಕೆಪಿಎಸ್ ಸಿ ಅಕ್ರಮ ನೇಮಕಾತಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಅಭ್ಯರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
2012ನೇ ಇಸವಿಯಲ್ಲಿ ಪರೀಕ್ಷೆ ಬರೆದಿದ್ದ ನೂರಾರು ಅಭ್ಯರ್ಥಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದು, 362 ಅಭ್ಯರ್ಥಿಗಳ ನೇಮಕಾತಿ ರದ್ದುಗೊಳಿಸಿ, ಸರ್ಕಾರ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಿ ಎಂದು ಆಗ್ರಹಿಸಿದ್ದಾರೆ.
2011ನೇ ಸಾಲಿನಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿತ್ತು. ವರದಿಯಲ್ಲಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗಿದೆ.
ಈ ಹಿನ್ನಲೆಯಲ್ಲಿ ಅಕ್ರಮವಾಗಿ ನೇಮಕಾತಿಗೊಂಡವರನ್ನು ವಜಾಗೊಳಿಸಿ ಹೊಸದಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಿ ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.