ಜನಾರ್ದನ ರೆಡ್ಡಿಗಿಲ್ಲ ಜಾಮೀನು
ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜಾನರ್ದನ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ನವದೆಹಲಿ: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜಾನರ್ದನ ರೆಡ್ಡಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಇಂದು ರೆಡ್ಡಿ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿರುವ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಸಿಬಿಐ ತನಿಖೆ ನಡೆಯುತ್ತಿರುವುದರಿಂದ ಈ ಅಂತದಲ್ಲಿ ಜಾಮೀನು ನೀಡಲು ಬರುವುದಿಲ್ಲ ಎಂದು ಹೇಳಿದೆ. ಅಲ್ಲದೆ ಮೂರು ತಿಂಗಳ ನಂತರ ಜಾಮೀನು ಅರ್ಜಿ ಸಲ್ಲಿಸುವಂತೆ ರಡ್ಡಿ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.