ದೆಹಲಿ ಪೊಲೀಸ್ ಪ್ರಧಾನ ಕಾರ್ಯಾಲಯದಲ್ಲಿ ಅಗ್ನಿ ಆಕಸ್ಮಿಕ
ಮಂಗಳವಾರ ದೆಹಲಿ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿರುವ ಬಗ್ಗೆ ವರದಿಯಾಗಿದೆ....
ನವದೆಹಲಿ: ಮಂಗಳವಾರ ದೆಹಲಿ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಬೆಳಗ್ಗೆ 7.10ಕ್ಕೆ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಲರಾಂ ಕೇಳಿಸಿದೆ. ತಕ್ಷಣವೇ ಅಗ್ನಿಶಾಮಕ ದಳದ 8 ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಕೆಲವು ತಿಂಗಳುಗಳ ಹಿಂದೆಯಷ್ಟೇ ಇದೇ ಕಟ್ಟಡದ 10ನೇ ಮಹಡಿಯಲ್ಲಿ ಮತ್ತು ಪಿಆರ್‌ಒ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದೀಗ ಪೊಲೀಸ್ ಹೆಡ್‌ಕ್ವಾಟರ್ಸ್‌ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಇದು ಮೂರನೇ ಬಾರಿಯಾಗಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದರಿಂದ ಜನರು ಜೀವಾಪಾಯದಿಂದ ಪಾರಾಗಿದ್ದಾರೆ.