ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ
ಸತಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಭಾರತೀಯ ...
ಬೆಂಗಳೂರು: ವಸತಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನಾ ಮೆರವಣಿಗೆ ಮೂಲಕ ಪ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಜೆಡಿಎಸ್ ಕಚೇರಿ ಬಳಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಶಾಸಕಿ ವೈ. ರಾಮಕ್ಕ ಸೇರಿದಂತೆ ಹಲವು ಪ್ರತಿಭಟನಾ ನಿರತ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ವಸತಿ ಯೋಜನೆಯಲ್ಲಿ ಹಿಂದೂಳಿದ, ದಲಿತ ಹಾಗೂ ಕೊಳಗೇರಿ ನಿವಾಸಿಗಳಿಗೆ ಸೂಕ್ತ ವಸತಿ ಸಿಗುತ್ತಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.