ಟೆಸ್ಟ್ ಕ್ರಿಕೆಟ್‌ಗೆ ಧೋನಿ ವಿದಾಯ..?
ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್..
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸುವ ಚಿಂತನೆಯಲ್ಲಿ ತೊಡಗಿದ್ದಾರೆ.
ಐಸಿಸಿಯ ಎಲ್ಲ ಬಗೆಯ ಟ್ರೋಫಿಗಳನ್ನು ಎತ್ತಿ ಹಿಡಿದ ಏಕೈಕ ನಾಯಕ ಎಂಬ ಕೀರ್ತಿಗೆ ಭಾಜನರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರು, ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗುವ ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಲಾರ್ಡ್ಸ್ ಪಂದ್ಯದ ಗೆಲುವಿನ ಬಳಿಕ ಮಾತನಾಡಿದ್ದ ಮಹೇಂದ್ರ ಸಿಂಗ್ ಧೋನಿ, ಲಾರ್ಡ್ಸ್ ಮೈದಾನದಲ್ಲಿ ಇದೇ ನನ್ನ ಕೊನೆಯ ಪಂದ್ಯ ಎಂದು ಹೇಳುವ ಮೂಲಕ ವಿದಾಯದ ಸೂಚನೆ ನೀಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು ಎರಡೂವರೆ ವರ್ಷಗಳ ಹಿಂದೆ ಮಾತನಾಡಿದ್ದ ಧೋನಿ, ತಾವು 2015ರ ವಿಶ್ವಕಪ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಲಬೇಕು ಎಂದರೆ ಯಾವುದಾದರೂ ಒಂದು ಮಾದರಿಯ ಕ್ರಿಕೆಟ್ ಅನ್ನು ತೊರೆಯಬೇಕು ಎಂದು ಹೇಳಿದ್ದರು. ಆ ಮೂಲಕ 2013ರ ಅಂತ್ಯದಲ್ಲಿ ತಾವು ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯಾಗುವುದಾಗಿ ಧೋನಿ ಪರೋಕ್ಷವಾಗಿ ಹೇಳಿದ್ದರು.
ಒಟ್ಟಾರೆ ತಮ್ಮ ನಿವೃತ್ತಿ ನಿರ್ಧಾರದ ಕುರಿತು ಮಹೇಂದ್ರ ಸಿಂಗ್ ಧೋನಿ ಸ್ಪಷ್ಟ ನಿಲುವು ತಳೆದಿದ್ದು, 2015ರ ವಿಶ್ವಕಪ್‌ನ ಹಿನ್ನಲೆಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಮುಂದಾಗಿದ್ದಾರೆ.