ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜುಲೈ 31ಕ್ಕೆ ಬೆಂಗಳೂರು ಬಂದ್

ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಜುಲೈ 31ಕ್ಕೆ ಬೆಂಗಳೂರು ಬಂದ್‌...

File photo
Lingaraj Badiger
Updated On : 25 Jul 2014, 7:40 am

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಜುಲೈ 31ಕ್ಕೆ ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ಈ ಕುರಿತು ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಅಂದು ಬೆಳಗ್ಗೆ 10 ಗಂಟೆಗೆ ಟೌನ್ ಹಾಲ್‌ನಿಂದ ಮೈಸೂರು ಬ್ಯಾಂಕ್ ವೃತ್ತ ಮಾರ್ಗವಾಗಿ ನಡೆದು ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಗುವುದು ಎಂದರು.

ಅತ್ಯಾಚಾರ ಪ್ರಕರಣ ಖಂಡಿಸಿ ಜುಲೈ 31ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಸರ್ಕಾರಿ ನೌಕರರು ಹಾಗೂ ವಕೀಲರ ಸಂಘ ಸೇರಿದಂತೆ ಎಲ್ಲಾ ಕನ್ನಡ ಪರ ಸಂಘಟನೆಗಳು ಸಹ ಬೆಂಬಲ ನೀಡಿವೆ ಎಂದು ವಾಟಾಳ್ ತಿಳಿಸಿದರು.

ಐಟಿ-ಬಿಟಿ ಕಂಪನಿ, ಶಾಲಾ ಕಾಲೇಜುಗಳು ಸಂಪೂರ್ಣವಾಗಿ ಜು. 31ರಂದು ಬಂದ್ ಮಾಡಬೇಕು. ಹಾಗೆಯೇ ಖಾಸಗಿ ಸೇರಿದಂತೆ ಸರ್ಕಾರಿ ಬಸ್ ಸಂಚಾರ ನಿಲ್ಲಿಸಲಾಗುವುದು. ಎಲ್ಲ ವರ್ಗದ ವ್ಯಾಪಾರಸ್ಥರು ತಮ್ಮ ವ್ಯವಹಾರಗಳನ್ನು ಸ್ಥಗಿತಗೊಳಿಸುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ನಂದಿನಿ ಹಾಲು, ಆ್ಯಂಬುಲೆನ್ಸ್ ಹಾಗೂ ಔಷಧ ಅಂಗಡಿಗಳಿಗೆ ವಿನಾಯಿತಿ ಇದೆ ಎಂದು ತಿಳಿಸಿದರು. ಬಂದ್‌ಗೆ ಸಂಬಂಧಿಸಿದಂತೆ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘ, ಕನ್ನಡ ಸೇನೆ, ರಾಜ್ಯ ದಲಿತ ಸಂಘರ್ಷ ಸಮಿತಿ ಸೇರಿದಂತೆ ರಾಜ್ಯ ರಕ್ಷಣಾ ವೇದಿಕೆಗಳು ಮತ್ತು ಸಂಘಟನೆಗಳು ಭಾಗವಹಿಸಲಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್, ನಿರ್ಮಾಪಕ ಸಾ.ರಾ ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement