ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಡರೋಗಿಗಳ ಸಹಾಯಕ್ಕಾಗಿ 'ರನ್ ಫಾರ್ ಎ ಬೀಟ್‌'

Srinivasa Murthy VN
Updated On : 25 Jul 2014, 4:53 am

ಬೆಂಗಳೂರು: ಹೃದಯ ಸಂಬಂಧಿ ಖಾಯಿಲೆಗೆ ತುತ್ತಾದ ಬಡಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಉದ್ಯತಿ ಟ್ರಸ್ಟ್ 'ರನ್ ಫಾರ್ ಎ ಬೀಟ್‌' ಎಂಬ ಕಾರ್ಯಕ್ರಮವನ್ನು ಆಗಸ್ಟ್ 10ರಂದು ಹಮ್ಮಿಕೊಂಡಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉದ್ಯತಿ ಟ್ರಸ್ಟ್ ಸದಸ್ಯೆ ದಿವ್ಯ ಅವರು, ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚುತ್ತಿದ್ದು, ಬಡತನ ರೇಖೆಗಿಂತ ಕೆಳಗೆ ಇರುವ ಜನರು ಹೃದಯ ಸಂಬಂಧಿ ಖಾಯಿಲೆಯ ವೆಚ್ಚ ಭರಿಸಲು ಸಾಧ್ಯವಾಗದೆ ಸಾವನ್ನಪ್ಪುತ್ತಿದ್ದಾರೆ.

ಇಂತಹ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ನಮ್ಮ ಟ್ರಸ್ಟ್ ಆಗಸ್ಟ್ 10ರಂದು 'ರನ್ ಫಾರ್ ಎ ಬೀಟ್‌' ಎಂಬ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಗ್ಗೆ 6.30ಕ್ಕೆ ಜಯನಗರದ 5ನೇ ಬ್ಲಾಕ್‌ನಿಂದ ಸಾಕು ಪ್ರಾಣಿಗಳೊಂದಿಗೆ ಓಟ ಆರಂಭವಾಗಲಿದೆ. ಮಾಲೀಕರು ತಮ್ಮ ನೆಚ್ಚಿನ ಸಾಕು ಪ್ರಾಣಿಗಳೊಂದಿಗೆ ಓಟದಲ್ಲಿ ಭಾಗಿಯಾಗಲು ಇದೊಂದು ಉತ್ತಮ ವೇದಿಕೆಯಾಗಿದು, ಈ ಕಾರ್ಯಕ್ರಮದಿಂದ ಬಂದ ಹಣವನ್ನು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡರೋಗಿಗಳ ಚಿಕಿತ್ಸಾ ವೆಚ್ಚಕ್ಕೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವವರು  5 ಸಾವಿರದಿಂದ 10 ಸಾವಿರವನ್ನು ಪಾವತಿಸಿ, ಜುಲೈ 31ರೊಳಗೆ ಈ ಕೆಳಕಂಡ ವಿಳಾಸಕ್ಕೆ ಭೇಟಿ ನೀಡಿ ನೊಂದಣಿ ಮಾಡಿಕೊಳ್ಳಬೇಕು. ಹಿರಿಯ ನಾಗರಿಕರಿಗೆ ಹಾಗೂ ವಿಕಲ ಚೇತನರಿಗೆ ಈ ಓಟದಲ್ಲಿ ವಿಶೇಷ ಅವಕಾಶ ನೀಡಲಾಗಿದೆ ಎಂದು ದಿವ್ಯಾ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7760598121
ವೆಬ್ ವಿಳಾಸ: Www.runforabeat.com

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement