ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ಪತ್ರೆಗೆ ದಾಖಲು

ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು...

Lingaraj Badiger
Updated On : 25 Jul 2014, 1:01 am

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅವರನ್ನು ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದಿನಿಂದಲೂ ಬೆನ್ನು ನೋವಿನಿಂದ ಬಳಲುತ್ತಿರುವ ಜನಾರ್ದನ ರೆಡ್ಡಿ ಅವರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಿಬಿಐ ವಿಶೇಷ ಕೋರ್ಟ್ ಫೆಬ್ರುವರಿಯಲ್ಲಿ ಅನುಮತಿ ನೀಡಿತ್ತು.

ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ 2011ರ ಸೆ. 5ರಂದು ಸಿಬಿಐ ಅಧಿಕಾರಿಗಳು ಜನಾರ್ದನ ರೆಡ್ಡಿ ಅವರನ್ನು ಬಳ್ಳಾರಿಯ ಅವರ ನಿವಾಸದಲ್ಲಿ ಬಂಧಿಸಿದ್ದರು. ಅಂದಿನಿಂದಲೂ ಅವರು ಜೈಲಿನಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement