ಸೀತಾಪುರದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಏಳು ಸಾವು
ಉತ್ತರ ಪ್ರದೇಶದ ಸೀತಾಪುರದಲ್ಲಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಘಟನೆಯಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಲಖನೌ: ಉತ್ತರ ಪ್ರದೇಶದ ಸೀತಾಪುರದಲ್ಲಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಘಟನೆಯಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೇನಾ ಮೂಲಗಳ ಪ್ರಕಾರ ಹೆಲಿಕಾಪ್ಟರ್ ಬರೇಲಿಯಿಂದ ಸೀತಾಪುರದ ಮಾರ್ಗವಾಗಿ ಅಲಹಾಬಾದ್‌ಗೆ ತೆರಳುತಿತ್ತು ಎಂದು ತಿಳಿದುಬಂದಿದೆ. ಆದರೆ ಸೀತಾಪುರದ ಬಳಿ ಪೈಲಟ್‌ನ ನಿಯಂತ್ರಣ ಕಳೆದುಕೊಂಡ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಪತನಗೊಳ್ಳುತ್ತಿದ್ದಂತೆಯೇ ಸ್ಥಳೀಯರು ಸೇನಾ ಸಿಬ್ಬಂದಿಗಳ ನೆರವಿಗೆ ಧಾವಿಸಿದ್ದರಾದರೂ, ಅಷ್ಟರೊಳಗಾಗಿಯೇ ಕಾಪ್ಟರ್‌ನಲ್ಲಿ ಬೆಂಕಿ ಹೊತ್ತಿಕೊಂಡು ಅದರಲ್ಲಿದ್ದ ಏಳು ಮಂದಿ ಸಾವಿಗೀಡಾಗಿದ್ದಾರೆ.
ಕೂಡಲೇ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾಪ್ಟರ್‌ಗೆ ಹೊತ್ತಿದ್ದ ಬೆಂಕಿಯನ್ನು ನಂದಿಸುತ್ತಿದ್ದಾರೆ. ಪ್ರಸ್ತುತ ಘಟನಾ ಸ್ಥಳಕ್ಕೆ ವಾಯು ಸೇನಾ ಅಧಿಕಾರಿಗಳು ಧಾವಿಸಿದ್ದು, ಕಾಪ್ಟರ್ ಪತನದ ಕುರಿತು ತನಿಖೆ ನಡೆಸುತ್ತಿದ್ದಾರೆ.