ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉ.ಪ್ರದೇಶದಲ್ಲಿ ಕೋಮು ಹಿಂಸಾಚಾರ: ಕರ್ಪ್ಯೂ ಹೇರಿಕೆ

ಭೂಮಿ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಹರಣ್‌ಪುರದಲ್ಲಿ..

Srinivasa Murthy VN
Updated On : 26 Jul 2014, 7:52 am

ಲಖನೌ: ಭೂಮಿ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಹರಣ್‌ಪುರದಲ್ಲಿ ಎರಡು ಕೋಮಿನ ನಡುವೆ ಘರ್ಷಣೆ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಪ್ರಸ್ತುತ ಘಟನಾ ಸ್ಥಳದಲ್ಲಿ ಕರ್ಫ್ಯೂ ಹೇರಲಾಗಿದ್ದು, ಉದ್ರಿಕ್ತ ಪ್ರತಿಭಟನಾಕಾರರು 20ಕ್ಕೂ ಹೆಚ್ಚು ಅಂಗಡಿಗಳನ್ನು ಮತ್ತು 15ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದ್ದಾರೆ. ಘರ್ಷಣೆ ವೇಳಿ ಇಬ್ಬರು ಸ್ಥಳೀಯರು ಮೃತಪಟ್ಟಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗುರುದ್ವಾರ ಸಮಿತಿಗೆ ಸೇರಿದೆ ಎನ್ನಲಾಗುತ್ತಿದ್ದ ಭೂಮಿಯಲ್ಲಿ ಸಿಖ್ ಸಮುದಾಯದವರು ಗುರುದ್ವಾರ ನಿರ್ಮಾಣಕ್ಕೆ ಮುಂದಾಗಿದ್ದರು. ಈ ವೇಳೆ ಆ ಜಾಗ ತಮ್ಮದೆಂದು ವಾದಿಸುತ್ತಿದ್ದ ವಕ್ಫ್ ಸಮಿತಿ ಸದಸ್ಯರು ಗುರುದ್ವಾರ ಸಮಿತಿ ಸದಸ್ಯರೊಂದಿಗೆ ಜಗಳಕ್ಕಿಳಿದಿದ್ದಾರೆ. ಅಲ್ಲದೆ ಉಭಯ ಕೋಮಿನ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಘರ್ಷಣೆ ಸಂಭವಿಸಿದೆ. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಎರಡೂ ಸಮಿತಿ ಸದಸ್ಯರನ್ನು ಮನವೋಲಿಸಲು ಮುಂದಾಗಿದ್ದರು.

ಆದರೆ ಪೊಲೀಸ್ ಮಧ್ಯಸ್ಥಿಕೆ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿದ ವಕ್ಫ್ ಸಮಿತಿ ಸದಸ್ಯರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಘಟನಾ ಸ್ಥಳದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಪ್ರಹಾರವನ್ನು ನಡೆಸಿದ್ದಾರೆ. ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲುಗಳನ್ನು ಮತ್ತು ಪೆಟ್ರೋಲ್ ಬಾಂಬ್‌ಗಳನ್ನು ಎಸೆಯುತ್ತಿದ್ದಾರೆ. ಹೀಗಾಗಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದು, ನಿಷೇಧಾಜ್ಞೆ ಹೊರಡಿಸಲಾಗಿದೆ.

ಪ್ರಸ್ತುತ ಗುರುದ್ವಾರ ನಿರ್ಮಾಣವಾಗುತ್ತಿರುವ ಭೂಮಿ ಕುರಿತಂತೆ ಗುರುದ್ವಾರ ಸಮಿತಿ ಮತ್ತು ವಕ್ಫ್ ಸಮಿತಿ ನಡುವೆ ಹಲವು ವರ್ಷಗಳಿಂದ ವ್ಯಾಜ್ಯ ನಡೆಯುತ್ತಿದ್ದು, ಪ್ರಕರಣ ಹೈಕೋರ್ಟ್ ಮೊರೆ ಹೋಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇತ್ತೀಚೆಗೆ ತನ್ನ ತೀರ್ಪು ನೀಡಿ, ವಿವಾದಿತ ಭೂಮಿ ಗುರದ್ವಾರ ಸಮಿತಿಗೆ ಸೇರಬೇಕು ಎಂದು ಆದೇಶ ಹೊರಡಿಸಿತ್ತು. ಹೀಗಾಗಿ ಗುರುದ್ವಾರ ಸಮಿತಿ ಸದಸ್ಯರು ಆ ಜಾಗದಲ್ಲಿ ಗುರುದ್ವಾರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಇದಕ್ಕೆ ವಕ್ಫ್ ಸಮಿತಿ ಸದಸ್ಯರು ಅಡ್ಡಿಪಡಿಸಿದಾಗ ಘರ್ಷಣೆ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement