ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಡಿನೋಟಿಫಿಕೇಶನ್ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿಎಂ

ಅಕ್ರಮ ಡಿನೋಟಿಫಿಕೇಶನ್ ಭೂತ ಶನಿವಾರ ಸಹ ಸದನದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ವಿಧಾನಸಭೆಯಲ್ಲಿ ಸಿಬಿಐ...

Lingaraj Badiger
Updated On : 26 Jul 2014, 12:09 pm

ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಭೂತ ಶನಿವಾರ ಸಹ ಸದನದಲ್ಲಿ ಭಾರಿ ಸದ್ದು ಮಾಡಿದ್ದು, ವಿಧಾನಸಭೆಯಲ್ಲಿ ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ತೀವ್ರ ಗದ್ದಲ ಸೃಷ್ಟಿಸಿದ್ದರಿಂದ ವಿಧಾನಸಭೆ ಕಲಾಪವನ್ನು ಸೋಮುವಾರಕ್ಕೆ ಮುಂದೂಡಲಾಗಿದೆ.

ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು, ಅರ್ಕಾವತಿ ಬಡಾವಣೆಯ 541 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಲಾಗಿದ್ದು, ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಮುಖ್ಯಮಂತ್ರಿಯಾದ ನಂತರ ಒಂದು ಗುಂಟೆ ಜಾಗವನ್ನು ಸಹ ಡಿನೋಟಿಫಿಕೇಶನ್ ಮಾಡಿಲ್ಲ. ಒಂದು ವೇಳೆ ನಾನು ಡಿನೋಟಿಫಿಕೇಶನ್ ಮಾಡಿದ್ದು, ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಆದರೆ ಸಾಬೀತಾಗದಿದ್ದರೆ ನೀವು ರಾಜಕೀಯ ನಿವೃತ್ತಿ ಪಡೆಯುತ್ತಿರಾ ಎಂದು ಸಿಎಂ ಪ್ರಶ್ನಿಸಿದರು.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೈಕಮಾಂಡ್‌ಗೆ ಫಂಡ್ ನೀಡಲು ಸಿದ್ದರಾಮಯ್ಯ ಈ ಅಕ್ರಮ ಎಸಗಿದ್ದಾರೆ ಎಂದು ಶೆಟ್ಟರ್ ಆರೋಪಿಸಿದರು.

ಆದರೆ ಇದು ಶೆಟ್ಟರ್ ಕಾಲದಲ್ಲೇ ಆದ ಶಿಫಾರಸು. ವಿಧಾನಸಭೆ ಚುನಾವಣೆಗೆ ಹಣ ಹೊಂದಿಸುವುದಕ್ಕಾಗಿ ಶೆಟ್ಟರ್ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಪ್ರತಿ ಆರೋಪ ಮಾಡಿದರು. ಹೀಗಾಗಿ ಆಡಳಿತ-ಪ್ರತಿಪಕ್ಷ ಸದಸ್ಯರು ಗದ್ದಲ ಸೃಷ್ಟಿಸಿದ್ದರಿಂದ ಸ್ಪೀಕರ್ ಕಾಗೋಡು ತಿಮ್ಮಪ್ಪ ಕಲಾಪವನ್ನು ಅರ್ಧ ಗಂಟೆಗಳ ಕಾಲ ಮುಂದೂಡಿದರು.

ಪುನಾ ಸದನ ಆರಂಭವಾದ ನಂತರವೂ ತನ್ನ ಪಟ್ಟು ಸಡಿಲಿಸಿದ ಬಿಜೆಪಿ ಸದಸ್ಯರು, ಅರ್ಕಾವತಿ ಬಡವಾಣೆಯ 541 ಎಕರೆ ಡಿನೋಟಿಫಿಕೇಶನ್ ಹಗಣರವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಿಜೆಪಿ ಸದಸ್ಯರ ಗದ್ದಲದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement