ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಯುಪಿಎಸ್‌ಸಿ: ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಸರ್ಕಾರ ಅಭಯ

ಕೇಂದ್ರ ನಾಗರಿಕ ಸೇವಾ ಆಯೋಗದ ನೂತನ ಪರೀಕ್ಷಾ ಕ್ರಮವನ್ನು ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು...

Rashmi Kasaragodu
Updated On : 28 Jul 2014, 3:15 am

ನವದೆಹಲಿ: ಕೇಂದ್ರ ನಾಗರಿಕ ಸೇವಾ ಆಯೋಗದ ನೂತನ ಪರೀಕ್ಷಾ ಕ್ರಮವನ್ನು ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ಒಂದು ವಾರದೊಳಗೆ ಸಮಸ್ಯೆ ಪರಿಹರಿಸುವುದಾಗಿ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.

ಪ್ರಧಾನಿಯವರ ಕಚೇರಿಯಲ್ಲಿ ರಾಜ್ಯ ಸಚಿವ ಜಿತೇಂದರ್ ಸಿಂಗ್ ಅವರ ಜತೆ ಮಾತನಾಡಿದ ರಾಜ್‌ನಾಥ್ ಸಿಂಗ್ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ಅಭ್ಯರ್ಥಿಗಳಿಗೆ ಅಭಯ ನೀಡಿದ್ದಾರೆ.

2014ರ ಸಿವಿಲ್ ಸರ್ವೀಸ್ ಪ್ರಾಥಮಿಕ ಪರೀಕ್ಷೆ ಆಗಸ್ಟ್ 24ಕ್ಕೆ ಆರಂಭವಾಗುವುದಾಗಿ ನಿಗದಿಯಾಗಿತ್ತು. ಆದರೆ ಅಭ್ಯರ್ಥಿಗಳು ನೂತನ ಪರೀಕ್ಷಾ ಕ್ರಮದಲ್ಲಿ ತಿದ್ದುಪಡಿ ತರಬೇಕೆಂದು ಒತ್ತಾಯಿಸಿರುವುದರಿಂದ ಪರೀಕ್ಷೆ ದಿನಾಂಕ ಮುಂದೂಡಲ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಯುಪಿಎಸ್‌ಸಿ ನೂತನಪರೀಕ್ಷಾ ಕ್ರಮದಿಂದ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯರಲ್ಲದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿರುವುದರಿಂದ ಆ ಪಠ್ಯಕ್ರಮವನ್ನು ಹಿಂಪಡೆಯಬೇಕೆಂದು  ಒತ್ತಾಯಿಸಿ ಅಭ್ಯರ್ಥಿಗಳು ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಾ ಇದ್ದಾರೆ.  

ಸೋಮವಾರ ಯುಪಿಎಸ್‌ಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅಭ್ಯರ್ಥಿಗಳು ನೋಂದಣಿ ಪತ್ರವನ್ನು ಸುಟ್ಟು ಹಾಕಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement