ಕಣಿವೆಗೆ ಉರುಳಿದ ಬಸ್: 20 ಪ್ರಯಾಣಿಕರು ಸಾವು
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಖಾಸಗಿ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ 20 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಶಿಮ್ಲಾದಿಂದ ಸವೇರಾಖಡ್ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ್ದರಿಂದ 20 ಪ್ರಯಾಣಿಕರು ಸಾವನ್ನಪ್ಪಿದ್ದು, ೭ ಮಂದಿಗೆ ತೀವ್ರ ಗಾಯಗಳಾಗಿವೆ.
ಖಾಸಗಿ ಬಸ್ನಲ್ಲಿ 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.