ಕೃಷಿ ಅಭಿವೃದ್ಧಿಗೆ ತಂತ್ರಜ್ಞಾನ ಬಳಸಿ: ಪ್ರಧಾನಿ ಮೋದಿ
ದೇಶದ ಪ್ರಗತಿಗಾಗಿ ರೈತರು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ...
ನವದೆಹಲಿ: ದೇಶದ ಪ್ರಗತಿಗಾಗಿ ರೈತರು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) 86ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ದೇಶದ ರೈತರು ಅಭಿವೃದ್ಧಿ ಹೊಂದುತ್ತಿದ್ದಾರೆಯೆ? ಎಂಬುದನ್ನು ಖಾತರಿ ಪಡಿಸುವುದು ಬಹುಮುಖ್ಯ ಎಂದಿದ್ದಾರೆ.
ಕೃಷಿ ಉತ್ಪಾದನೆಯಲ್ಲಿ ಅಭಿವೃದ್ಧಿ ಕಾಣಬೇಕಾದರೆ, ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿ, ಅದು ರೈತರಿಗೆ ಉಪಯೋಗವಾಗುವಂತೆ ಮಾಡಬೇಕು.
ತಂತ್ರಜ್ಞಾನದಲ್ಲಿ ಅಭಿವೃದ್ಧಿ ಸಾಧಿಸುವುದರ ಜತೆಗೆ ರೈತರಿಗೆ ಉತ್ತಮ ತಂತ್ರಜ್ಞಾನವನ್ನು ಅಳವಡಿಸಲು ಪ್ರೋತ್ಸಾಹ ನೀಡಬೇಕು ಎಂದು ಹೇಳಿದ್ದಾರೆ.
ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದ ಮೋದಿ, ಕೃಷಿ ವಿಶ್ವ ವಿದ್ಯಾಲಯಗಳು ರೈತರ ಬಗ್ಗೆ ಕಾಳಜಿ ವಹಿಸಬೇಕು. ನಮ್ಮ ರೈತರು ಹೆಚ್ಚಾಗಿ ರೇಡಿಯೋ ಕೇಳುತ್ತಾರೆ. ಆದ್ದರಿಂದ ಕೃಷಿ ಸಂಬಂಧಿ ರೇಡಿಯೋ ಸ್ಟೇಷನ್‌ನ್ನು ಆರಂಭಿಸುವ ಅಗತ್ಯವಿದ್ದು ಈ ಮೂಲಕ ಕೃಷಿ ಬಗ್ಗೆ ಕಲಿಯುವ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಶೋಧನೆಗಳನ್ನು ನಡೆಸಲು ಪ್ರೇರೇಪಿಸಬೇಕೆಂದು ಹೇಳಿದ್ದಾರೆ.