ದೇಶಾದ್ಯಂತ ಸಂಭ್ರಮದ ಈದ್ ಆಚರಣೆ
ಮುಸ್ಲಿಮರ ಪವಿತ್ರ ರಂಜಾನ್ ಮಾಸಾಚರಣೆಯ ನಂತರ ಇಂದು ದೇಶಾದ್ಯಂತ ಈದ್ ಉಲ್...
ನವದೆಹಲಿ: ಮುಸ್ಲಿಮರ ಪವಿತ್ರ ರಂಜಾನ್ ಮಾಸಾಚರಣೆಯ ನಂತರ ಇಂದು ದೇಶಾದ್ಯಂತ ಈದ್ ಉಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಮಂಗಳವಾರ ಬೆಳಗ್ಗೆ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇಶದ ಕೆಲವೊಂದು ಪ್ರದೇಶಗಳಲ್ಲಿ ಸೋಮವಾರ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರ ಈದ್ ಆಚರಣೆ ಮಾಡಲಾಗುತ್ತಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಎಲ್ಲರಿಗೂ ಈದ್ ಹಬ್ಬದ ಶುಭ ಹಾರೈಕೆ ನೀಡಿದ್ದು, ದೇಶದ ಜನರಲ್ಲಿ ಏಕತೆ, ಸಹೋದರತ್ವ, ಶಾಂತಿ ನೆಲೆಸಲಿ ಎಂದು ಪ್ರಧಾನಿ ಮೋದಿ ಟ್ವೀಟರ್‌ನಲ್ಲಿ ಶುಭ ಹಾರೈಸಿದ್ದಾರೆ.
ಈ ಶುಭ ದಿನ ಎಲ್ಲರಿಗೂ ಶಾಂತಿ, ಸಂತೋಷ ಹಾಗು ದೇಶಕ್ಕೆ ಅಭಿವೃದ್ಧಿಯನ್ನು ತರುವಂತಾಗಲಿ ಎಂದು ಗೃಹ ಸಚಿವ ರಾಜ್‌ನಾಥ್ ಸಿಂಗ್ ತಮ್ಮ ಫೇಸ್‌ಬುಕ್‌ನಲ್ಲಿ ಶುಭ ಹಾರೈಸಿದ್ದಾರೆ.