ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಸಬ್ ಕಾ ಸಾಥ್, ಸಬ್ ಕಾ ವಿಕಾಸ್': ಮೋದಿ ಬಗ್ಗೆ ಕೆರ್ರಿ ಪ್ರಶಂಸೆ

ಇನ್ನೇನು ಎರಡು ದಿನಗಳಲ್ಲಿ ಭಾರತಕ್ಕೆ ಆಗಮಿಸಲಿರುವ ಅಮೆರಿಕದ ಕಾರ್ಯದರ್ಶಿ ಜಾನ್ ಕೆರ್ರಿ ಅವರು ಪ್ರಧಾನಿ ...

Rashmi Kasaragodu
Updated On : 29 Jul 2014, 11:58 am

ವಾಷಿಂಗ್ಟನ್ : ಇನ್ನೇನು ಎರಡು ದಿನಗಳಲ್ಲಿ ಭಾರತಕ್ಕೆ ಆಗಮಿಸಲಿರುವ ಅಮೆರಿಕದ ಕಾರ್ಯದರ್ಶಿ ಜಾನ್ ಕೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶಂಸೆಯ ಸುರಿಮಳೆಗೈದಿದ್ದಾರೆ.

ಸೆಂಟರ್ ಫಾರ್ ಅಮೆರಿಕನ್ ಪ್ರಾಗ್ರೆಸ್ ನಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಕೆರ್ರಿ, ಭಾರತದೊಂದಿಗಿನ ಅಮೆರಿಕದ ಈ ಸೌಹಾರ್ದ  21ನೇ ಶತಮಾನದ ಉತ್ತಮ ಬೆಳವಣಿಗೆಯಲ್ಲೊಂದಾಗಿದೆ ಎಂದಿದ್ದಾರೆ .

ಭಾರತದೊಂದಿಗಿನ ಉತ್ತಮ ಬಾಂಧವ್ಯ ಚಿಗುರಲಿದ್ದು, ಉಭಯ ರಾಷ್ಟ್ರಗಳು ಹವಾಮಾನ ವೈಪರೀತ್ಯ ಸೇರಿದಂತೆ ಇನ್ನಿತಕ ಜಾಗತಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒಂದಾಗಿ ಕೆಲಸ ಮಾಡಲಿವೆ ಎಂದು ಕೆರ್ರಿ ಹೇಳಿದ್ದಾರೆ.

ಅದೇ ವೇಳೆ ನರೇಂದ್ರ ಮೋದಿ ಸರ್ಕಾರದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಧ್ಯೇಯವನ್ನು ಪ್ರಶಂಸಿಸಿದ ಕೆರ್ರಿ, ಭಾರತದೊಂದಿಗೆ ಸೇರಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಯೋಚನೆ ಇದೆ ಎಂದಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement