ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಬೆಂಬಲ ಇಲ್ಲ: ಶಿವರಾಮೇಗೌಡ

ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ...

Vishwanath S
Updated On : 30 Jul 2014, 4:20 am

ಬೆಂಗಳೂರು: ರಾಜ್ಯದಲ್ಲಿನ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಾಳೆ ನಡೆಯಲಿರುವ ಬೆಂಗಳೂರು ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದೆ.

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರವನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡುವುದಿಲ್ಲ ಎಂದು ಜಂಟಿ ಸಮಿತಿ ಅಧ್ಯಕ್ಷ ಶಿವರಾಮೇಗೌಡ ಹೇಳಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯವನ್ನು ನಾವು ವಿರೋಧಿಸುತ್ತೇವೆ. ಅದೆ ರೀತಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು. ಆದರೆ ಇದಕ್ಕೆಲ್ಲ ಬಂದ್ ಮಾಡುವ ಅಗತ್ಯವಿಲ್ಲ ಎಂದು ಶಿವರಾಮೇಗೌಡ ತಿಳಿಸಿದ್ದಾರೆ.

ನಮಗೆ ನಮ್ಮದೇ ಆದ ಕಟ್ಟುಪಾಡುಗಳಿರುತ್ತವೆ ಅವುಗಳನ್ನು ಆಲೋಚಿಸಬೇಕು. ಹೀಗಾಗಿ ಬಂದ್ ಆಚರಣೆಗೆ ನಮ್ಮ ಖಾಸಗೀ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡುವುದಿಲ್ಲ. ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕನುಗುಣವಾಗಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ರಾಜ್ಯ ಕನ್ನಡ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಜು. 31ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement