ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಬೆಳಗಾವಿ ಗದ್ದಲ

ಸೂರ್ಯ ಚಂದ್ರರಿರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ 'ಬೆಳಗಾವಿ ಎಂದೆದಿಗೂ ನಮ್ಮದೇ' ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ...

Vishwanath S
Updated On : 30 Jul 2014, 3:02 am

ನವದೆಹಲಿ: ಸೂರ್ಯ ಚಂದ್ರರಿರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ 'ಬೆಳಗಾವಿ ಎಂದೆದಿಗೂ ನಮ್ಮದೇ' ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಅವರು ಲೋಕಸಭೆಯಲ್ಲಿ ಗುಡುಗಿದ್ದಾರೆ.

ಬೆಳಗಾವಿ ಜಿಲ್ಲೆಯ ಯುಳ್ಳೂರಿನ ವಿವಾದಿತ ಮಹಾರಾಷ್ಟ್ರ ರಾಜ್ಯ ನಾಮಫಲಕ ತೆರವು ವಿಚಾರ ಬುಧವಾರ ಲೋಕಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲಕ್ಕೆ ಕಾರಣವಾಯಿತು. ವಿಷಯ ಪ್ರಸ್ತಾವನೆ ಮಾಡಿ ಮಾತನಾಡಿದ ಶಿವಸೇನೆ ಸಂಸದ ಅರವಿಂದ್ ಸಾವಂತ್ ಪ್ರಸ್ತಾಪಿಸಿ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ದೌರ್ಜನ್ಯ ನಡೆಯುತ್ತಿದೆ ಇದನ್ನು ತಡೆಯಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಮಾತನಾಡಿದ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಶಾಂತಿಯುತವಾಗಿ ಸಹಬಾಳ್ವೆ ನಡೆಸುತ್ತಿದ್ದಾರೆ. ಆದರೆ ಕೆಲ ದುಷ್ಕರ್ಮಿಗಳು ನಾಮಫಲಕದ ಹೆಸರಿನಲ್ಲಿ ಗೊಂದಲ ಸೃಷ್ಟಿಸಿ ವಿವಾದ ಹುಟ್ಟು ಹಾಕಿದ್ದಾರೆ ಎಂದರು.

ಜಗತ್ತಿನಲ್ಲಿ ಸೂರ್ಯ ಚಂದ್ರರಿರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಜೋಷಿ ಗುಡುಗಿದರು. ಸದ್ಯ ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ಅಲ್ಲದೆ ಮಹಾಜನ್ ವರದಿಯಲ್ಲೂ ಬೆಳಗಾವಿ ಕರ್ನಾಟಕ ಭಾಗ ಎಂದು ಹೇಳಲಾಗಿದೆ ಎಂದರು.

ಪ್ರಹ್ಲಾದ್ ಜೋಷಿ ಮಾತನಾಡುತ್ತಿದ್ದ ವೇಳೆ ಮಹಾರಾಷ್ಟ್ರದ ಶಿವಸೇನೆಯ ಸಂಸದರು ತೀವ್ರ ಗದ್ದಲವೆಬ್ಬಿಸಿದರು. ಸಂಸದರ ಗದ್ದಲದಿಂದ ಸದನದಲ್ಲಿ ತೀವ್ರ ಕೋಲಾಹಲ ಉಂಟಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement