ತೆರಿಗೆ ಬಾಕಿ: ಕೋರ್ಟ್ಗೆ ಮಲ್ಯ ಹಾಜರು
ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ...
ಬೆಂಗಳೂರು: ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಅವರು ಗುರುವಾರ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರಾಗಿದ್ದರು.
ಕಿಂಗ್ಫಿಶರ್ ಏರ್ಲೈನ್ಸ್ ಸಂಸ್ಥೆ ಸುಮಾರು 266 ಕೋಟಿ ರುಪಾಯಿಯನ್ನು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ದೂರು ದಾಖಲಿಸಿತ್ತು. ಇದರಿಂದಾಗಿ ವಿಜಯ್ ಮಲ್ಯ ಅವರು ಇಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು.
ತೆರಿಗೆ ಕಟ್ಟದ ಮಲ್ಯಗೆ ಈ ಹಿಂದೆ ಕೋರ್ಟ್ ಹಲವು ಬಾರಿ ನೋಟಿಸ್ ಜಾರಿಗೊಳಿಸಿದ್ದರೂ ವಿಜಯ್ ಮಲ್ಯ ಕೋರ್ಟ್ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಜಯ್ ಮಲ್ಯರಿಗೆ ಸಮಸ್ಸ್ ಜಾರಿ ಮಾಡಿತ್ತು. ಇದರಿಂದಾಗಿ ಅನಿವಾರ್ಯವಾಗಿ ಮಲ್ಯ ಕೋರ್ಟ್ಗೆ ಹಾಜರಾಗಿ ಬಾಕಿಯನ್ನು ಪಾವತಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಪ್ರಕರಣದ ಸಂಬಂಧ ಜಾಮೀನು ನೀಡುವಂತೆ ಮಲ್ಯ ಅವರು ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದರು.