ಬೆಂಗಳೂರು ಬಂದ್ಗೆ ಮಿಶ್ರ ಪ್ರತಿಕ್ರಿಯೆ
ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ...
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಸಹಜವಾಗಿದೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್, ಆಟೋ ಹಾಗೂ ರೈಲು ಸಂಚಾರದಲ್ಲಿ ಯಾವುದೇ ವತ್ಯಯ ಉಂಟಾಗಿಲ್ಲ. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಶೇ.10ರಷ್ಟು ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕೆಲ ಖಾಸಗಿ ಶಾಲೆ, ಕಾಲೇಜುಗಳು ರಜೆ ಘೋಷಿಸಿದ್ದು, ಆರ್ಎಂಸಿ ಯಾರ್ಡ್, ನಗರದ ಮಾಲ್ಗಳು, ಚಿತ್ರ ಮಂದಿರಗಳು, ಖಾಸಗಿ ಶಾಲೆಗಳು, ಹೋಟೆಲ್ ಮಾಲೀಕರು, ಸರ್ಕಾರಿ ನೌಕರರ ಸಂಘಟನೆ, ಖಾಸಗಿ ವಾಹನ ಮಾಲೀಕರ ಕೆಲ ಸಂಘಟನೆಗಳು ಹಾಗೂ ಬೆಂಗಳೂರು ಜ್ಯುವೆಲ್ಲರ್ಸ್ ಮಾಲೀಕರ ಸಂಘ ಮತ್ತು ಗಾರ್ಮೆಂಟ್ಸ್ ಕಂಪನಿಗಳು ಸಹ ಬಂದ್ಗೆ ಬೆಂಬಲ ಸೂಚಿಸಿ ರಜೆ ಘೋಷಣೆ ಮಾಡಿವೆ.
ಕರವೇ ಕಾರ್ಯಕರ್ತರು ಕೆಲವು ಕಡೆ ಅಂಗಡಿ ಮುಂಗಟ್ಟಗಳನ್ನು ಬಲವಂತವಾಗಿ ಬಂದ್ ಮಾಡುತ್ತಿರುವುದನ್ನು ಹೊರತುಪಡಿಸಿ ಬೆಂಗಳೂರು ಬಂದ್ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.
ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು ಬಂದ್ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳು ಕನ್ನಡ ಚಳವಳಿ ವಾಟಾಳ ಪಕ್ಷದ ಅಧ್ಯಕ್ಷ ವಾಟಾಳ ನಾಗರಾಜ್ ಅವರ ನೇತೃತ್ವದಲ್ಲಿ ನಗರದ ಟೌನ್ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ.