ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ...
ನವದೆಹಲಿ: ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಇಂದು ದೆಹಲಿಯಲ್ಲಿ ಎಐಸಿಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರರಿಗೆ ಪ್ರತಿಸ್ಪರ್ಧಿಯಾಗಿ ಶಾಂತವೀರಪ್ಪನವರನ್ನು ಕಾಂಗ್ರೆಸ್ ಅಖಾಡಕ್ಕೆ ಇಳಿಸಿದೆ.
ಬಳ್ಳಾರಿ ಗ್ರಾಮಾಂತರ(ಪರಿಶಿಷ್ಟ ಪಂಗಡ-ಮೀಸಲು) ವಿಧಾನಸಭೆ ಕ್ಷೇತ್ರದಿಂದ ಎನ್.ವೈ. ಗೋಪಾಲಕೃಷ್ಣ ಅವರಿಗೆ ಟಿಕೆಟ್ ನೀಡಿದ್ದು, ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ ಅವರನ್ನು ಕಣಕ್ಕೀಳಿಸಿದೆ.
ಪ್ರಸ್ತುತ ಉಪ ಚುನಾವಣೆಯಲ್ಲಿ ಜೆಡಿಎಸ್ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿರುವುದರಿಂದ ಈ ಉಪ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ನೇರ ಪೈಪೋಟಿ ನಡೆಯಲಿದೆ.