ಪುಣೆ ಭೂಕುಸಿತ: ಮೃತರ ಸಂಖ್ಯೆ 51ಕ್ಕೇರಿಕೆ
ಮಹಾ ಮಳೆಯಿಂದಾಗಿ ಮಾಲಿನ ಗ್ರಾಮದಲ್ಲಿ ಬುಧವಾರ ಸಂಭವಿಸಿದ ಗುಡ್ಡ ಕುಸಿತದಲ್ಲಿ...
ಪುಣೆ: ಮಹಾ ಮಳೆಯಿಂದಾಗಿ ಮಾಲಿನ ಗ್ರಾಮದಲ್ಲಿ ಬುಧವಾರ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 51ಕ್ಕೇರಿದೆ.
ಪ್ರತಿಕೂಲ ಹವಾಮಾನದ ನಡುವೆಯೂ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡವರ ರಕ್ಷಣಾ ಕಾರ್ಯ ಮೂರನೇ ದಿನವಾದ ಶುಕ್ರವಾರವೂ ಭರದಿಂದ ಸಾಗಿದ್ದು, ಇಂದು ಸುಮಾರು 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತರಲ್ಲಿ 23 ಪುರುಷರು, 22 ಮಹಿಳೆಯರು ಹಾಗೂ 6 ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈವರೆಗೆ ಕೇವಲ 8 ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತ ನಡೆದು 48 ಗಂಟೆಗಳಾಗಿದ್ದರಿಂದ ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಇದೆ. ಆದರು ಅವಶೇಷಗಳಡಿ ಸಿಲುಕಿರುವರನ್ನು ರಕ್ಷಿಸುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಮಹಾರಾಷ್ಟ್ರದ ಜಿಲ್ಲಾ ಕೇಂದ್ರವಾದ ಪುಣೆಯಿಂದ ಸುಮಾರು 120 ಕಿ.ಮೀ ದೂರದಲ್ಲಿದೆ. ಇಲ್ಲಿ ನಡೆದ ದುರಂತದಲ್ಲಿ 44 ಮನೆಗಳು ಭೂಕುಸಿತಕ್ಕೆ ಸಿಲುಕಿ ಮಣ್ಣಿನಡಿ ಸೇರಿದ್ದವು.