ಭೂಮಿ ಒತ್ತುವರಿ ತೆರವಿಗೆ ಸಿಎಂಗೆ ಮನವಿ
ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಕಾರ್ಯಪಡೆಯನ್ನು ಮರು ಸ್ಥಾಪಿಸಬೇಕೆಂದು ಜನ ಸಂಗ್ರಾಮ ಪರಿಷತ್ ಅಗ್ರಹಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿ ಮಾತನಾಡಿದ ಜನ ಸಂಗ್ರಾಮ ಪರಿಷತ್ನ ಅಧ್ಯಕ್ಷ ಯತಿರಾಜ್ ಅವರು, ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್ ಮತ್ತು ಬಳ್ಳಾರಿಯ ಲಾಡ್ಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸೀದ್ದಾರೆ.
ಸರ್ಕಾರಿ ಜಮೀನುಗಳ ಒತ್ತುವರಿ ಬಗ್ಗೆ ಎ.ಟಿ.ರಾಮಸ್ವಾಮಿ ನೇತೃತ್ವದ ಸಮಿತಿಯ ವರದಿಯಲ್ಲಿ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬವು ಸಾರ್ವಜನಿಕ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದರು ಸಹ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಯತಿರಾಜ್ ಹೇಳಿದ್ದಾರೆ.