ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೋನಿಯಾ, ರಾಹುಲ್ ವಿರುದ್ಧ ಜಾರಿ ನಿರ್ದೇಶನಾಲಯದಿಂದ ತನಿಖೆ ಆರಂಭ

Vishwanath S
Updated On : 1 Aug 2014, 3:59 am

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಪ್ರಾಥಮಿಕ ತನಿಖೆ ಆರಂಭಿಸಿದೆ.

ನ್ಯಾಷನಲ್ ಹೆರಾಲ್ಡ್ ಮಾಲೀಕತ್ವವನ್ನು ಸ್ವಾಧೀನಕ್ಕೆ ಪಡಿಸಿಕೊಂಡಿದ್ದ ಸೋನಿಯಾ ಹಾಗೂ ರಾಹುಲ್ ಗಾಂಧಿ ವಿರುದ್ಧದ ಮೋಸ ಮತ್ತು ವಿಶ್ವಾಸ ವಂಚನೆ ಆರೋಪದ ನಿಖರತೆಯನ್ನು ತಿಳಿಸಲು ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದೆ ಎಂದು ವರದಿಗಳು ಹೇಳುತ್ತಿವೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಕೇಳಲು ದೆಹಲಿ ಹೈಕೋರ್ಟ್ ನಿರ್ಧರಿಸಿದ್ದರಿಂದ ಜಾರಿ ನಿರ್ದೇಶನಾಲಯ ತನಿಖೆಯನ್ನು ಪ್ರಾರಂಭಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಹಾಗೂ ರಾಹುಲ್ ಗಾಂಧಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾಲೀಕತ್ವವನ್ನು ಪಡೆದು ಮೋಸ ಮತ್ತು ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಕೇಸ್ ದಾಖಲಿಸಿದ್ದರು. ಈ ಸಂಬಂಧ ಕಳೆದ ಜೂನ್ ತಿಂಗಳಲ್ಲಿ ನ್ಯಾಯಾಲಯ ತಾಯಿ ಮಗನಿಗೆ ಸಮನ್ಸ್ ಜಾರಿ ಮಾಡಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆ ಗೆದ್ದು, ಅಧಿಕಾರ ಪಡೆದಿರುವ ಬಿಜೆಪಿ ಸೇಡಿನ ಮನೋವೃತ್ತಿ ತೋರುತ್ತಿದೆ ಎಂದು ಆಪಾದಿಸಿದೆ.

ಮಾಜಿ ಪ್ರಧಾನಿ ದಿ.ಜವಾಹರಲಾಲ್ ನೆಹರೂ ಅವರು ಸ್ಥಾಪಕ ಸಂಪಾದಕರಾಗಿದ್ದ 'ನ್ಯಾಷನಲ್ ಹೆರಾಲ್ಡ್‌' ಪತ್ರಿಕೆಗೆ ಸೇರಿದ ಸುಮಾರ 1,600 ಕೋಟಿ ರುಪಾಯಿ ಮೌಲ್ಯದ ಆಸ್ತಿ ಕಬಳಿಸಲು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಸಾರ್ವಜನಿಕ ಕಂಪನಿಯನ್ನು ಖಾಸಗಿ ಕಂಪನಿಯಾಗಿ ಮಾರ್ಪಡಿಸಿಕೊಂಡಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement