ಕರ್ನಾಟಕದ ರಾಜ್ಯಪಾಲರಾಗಿ ಪ್ರೊ. ವಿಜಯ್ಕುಮಾರ್ ನೇಮಕ?
ದೆಹಲಿ ಬಿಜೆಪಿಯ ಹಿರಿಯ ನಾಯಕ ಪ್ರೊ.ವಿಜಯ್ ಕುಮಾರ್...
ನವದೆಹಲಿ: ದೆಹಲಿ ಬಿಜೆಪಿಯ ಹಿರಿಯ ನಾಯಕ ಪ್ರೊ.ವಿಜಯ್ ಕುಮಾರ್ ಮಲ್ಹೋತ್ರಾ ಅವರು ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಆಗಮಿಸುವ ಸಾಧ್ಯತೆ ಇದೆ.
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಅಧಿಕಾರ ಅವಧಿ ಇದೇ ತಿಂಗಳು 29ಕ್ಕೆ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಜಯ್ ಕುಮಾರ್ ಮಲ್ಹೋತ್ರಾ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕ ಮಾಡುವ ಸಾಧ್ಯತೆ ಇದೆ.
ಹಂಸರಾಜ್ ಭಾರದ್ವಾಜ್ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದ್ದರು. ಜತೆಗೆ ಆಡಳಿತ ವೈಖರಿ ಬಗ್ಗೆ ಸಾರ್ವಜನಿಕವಾಗಿ ಟೀಕಿಸಿ, ಚಾಟಿ ಬೀಸುವ ಕೆಲಸ ಮಾಡುತ್ತಿದ್ದರು. ವಿಶೇಷ ಎಂದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದಮೇಲೂ ಅವರು ಆಗಾಗ್ಗೆ ಸರ್ಕಾರಕ್ಕೆ ಚಾಟಿ ಏಟು ನೀಡುತ್ತಲೇ ಇದ್ದಾರೆ.