ಮುಂಡೆ ಅಕಾಲಿಕ ನಿಧನಕ್ಕೆ ಪ್ರಧಾನಿ, ರಾಷ್ಟ್ರಪತಿ ಸಂತಾಪ
ನವದೆಹಲಿ: ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ನಿಧನ ಅಘಾತ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಡೆ ಅವರ ಸಾವಿನಿಂದ ಅಪಾರ ನಷ್ಟವಾಗಿದೆ. ಹಿಂದುಳಿದ ವರ್ಗಗಳ ಜನನಾಯಕರಾಗಿದ್ದ ಮುಂಡೆ ಅವರ ನಿಧನದಿಂದ ಸರ್ಕಾರ ತುಂಬಲಾರದ ನಷ್ಟವಾಗಿದೆ ಎಂದು ಮೋದಿ ವಿಷಾಧಿಸಿದ್ದಾರೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಂಡೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಬಿಜೆಪಿ ನಾಯಕರಾದ ನಿತನ್ ಗಡ್ಕರಿ, ಕೇಂದ್ರ ಸಚಿವರಾದ ಸದಾನಂದಗೌಡ, ಅನಂತಕುಮಾರ್, ಸ್ಮೃತಿ ಇರಾನಿ, ಹರ್ಷವರ್ಧನ್ ಮುಂಡೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮುಂಡೆ ಅವರ ನಿಧನ ದುಃಖಕರ ಸುದ್ದಿ, ಅವರ ನಿಧನದಿಂದ ದೇಶಕ್ಕೆ ನಷ್ಟವಾಗಿದೆ. ಅವರು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೇಂದ್ರ ಸಚಿವ ಸಿದ್ದೇಶ್ವರ್ ಹೇಳಿದ್ದಾರೆ.