ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗೋಪಿನಾಥ್ ಮುಂಡೆ ಪಂಚಭೂತಗಳಲ್ಲಿ ಲೀನ

ಅಪಘಾತದಿಂದ ಮೃತಪಟ್ಟ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ...

Mainashree
Updated On : 4 Jun 2014, 5:06 am

ಪರಲಿ: ಅಪಘಾತದಿಂದ ಮೃತಪಟ್ಟ ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಅಂತ್ಯಸಂಸ್ಕಾರವನ್ನು ಅವರ ಸ್ವಗ್ರಾಮ ಪರಲಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು.

ನಿನ್ನೆ ಕಾರು ಅಪಘಾತದಲ್ಲಿ ಮೃತಪಟ್ಟ ಗೋಪಿನಾಥ್ ಮುಂಡೆ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿದ್ದು, ಪುತ್ರಿ ಪಂಕಜಾ ಅವರು ವಿಧಿವಿಧಾನದೊಂದಿಗೆ ಮುಂಡೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರಲಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೇರವೇರಿತು.

ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಮುಂಡೆ ಅವರ ಅಭಿಮಾನಿಗಳು 'ಮುಂಡೆ ಅಮರ್ ರಹೇ' ಘೋಷಣೆ ಕೂಗುವುದರ ಮೂಲಕ ಅಂತಿಮ ನಮನ ಸಲ್ಲಿಸಿದ್ದಾರೆ.

ಅಂತ್ಯಕ್ರಿಯೆ ವೇಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement